ಮಣಿಪಾಲ: ನೀರಿನ ಟ್ಯಾಂಕರ್ ಸ್ಕೂಟರ್‌ಗೆ ಢಿಕ್ಕಿ – ಸಿಟಿ ಬಸ್ ಚಾಲಕ ಮೃತ್ಯು

ಉಡುಪಿ, ಫೆ.12: ನೀರಿನ ಟ್ಯಾಂಕರ್ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟ ಘಟನೆ ದೊಡ್ಡಣಗುಡ್ಡೆ ಬಾಳಿಗಾ ಆಸ್ಪತ್ರೆ ಬಳಿ ಇಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಪೆರಂಪಳ್ಳಿ ನಿವಾಸಿ, ಖಾಸಗಿ ಸಿಟಿ ಬಸ್ ಚಾಲಕ ಮಂಜುನಾಥ್ (36) ಎಂದು ಗುರುತಿಸಲಾಗಿದೆ. ಇವರು ತನ್ನ ಸ್ಕೂಟರ್‌ನಲ್ಲಿ ಬಾಳಿಗ ಆಸ್ಪತ್ರೆ ಕಡೆಯಿಂದ ಪೆರಂಪಳ್ಳಿಯ ತನ್ನ ಮನೆಗೆ ಹೋಗುತ್ತಿದ್ದಾಗ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Latest Indian news

Popular Stories