ರಾಮನಗರ | ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ರಾಮನಗರ: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಸೋಮವಾರ ನಡೆದಿದೆ.

ಮೂವರು ಯುವತಿಯರು, ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಪೀಣ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಹರ್ಷಿತ, ಅಭಿಷೇಕ್, ತೇಜಸ್, ವರ್ಷ, ಸ್ನೇಹ ಮೃತ ದುರ್ದೈವಿಗಳು.

ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಮಧ್ಯಾಹ್ನ ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ನೀರಿನ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಹೊರತೆಗೆಯುವ ಪ್ರಯತ್ನದಲ್ಲಿದ್ದಾರೆ.

Latest Indian news

Popular Stories