____________
ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಒಂಬತ್ತು ಜನರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೊಹಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ದೇವಕಾಲಿ ಗ್ರಾಮದ ಬಳಿಯ ಜಿಟಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಎರಡು ವಾಹನಗಳು ರಸ್ತೆಯ ಬದಿಗೆ ಬಂದು ಡಿಕ್ಕಿ ಹೊಡೆದು ನಿಂತಿದೆ ಇದೆ ವೇಳೆ ವೇಗವಾಗಿ ಬಂದ ಟ್ರಕ್ ಎರಡೂ ವಾಹನಗಳಿಗೂ ಡಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ಸವಾರ ಸೇರಿ ಜೀಪ್ ನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಟ್ರಕ್ ಅನ್ನು ವಶಕ್ಕೆ ಪಡೆದುಕೊಂಡಿ ತನಿಖೆ ನಡೆಸಲಾಗುವುದೆಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ, ಅಲ್ಲದೆ ಮೃತರ ಕುಟುಂಬಕ್ಕೆ ನೆರವು ನೀಡುವುದಾಗಿ ಹೇಳಿದ್ದಾರೆ.