ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಆ.13ರ ಮಂಗಳವಾರ ಅಗಸರಕೋಣೆ ಬಳಿ ನಡೆದಿದೆ.
ಅಗಸರಕೋಣೆಯ ಶರತ್ ಹಾಗೂ ಕೇರಳದ ಮೂಲದ ಸಂತೋಷ್ ಮೃತಪಟ್ಟವರು ಎಂದು ತಿಳಿದು ಬಂದಿದೆ.
ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಅಪಘಾತ ನಡೆದಿದೆ.ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಒಬ್ಬ ಹಾಗೂ ಪಿಕಪ್ ನಲ್ಲಿದ್ದ ಮತ್ತೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪಿಕಪ್ ವಾಹನದ ಚಾಲಕ ಪರಾರಿಯಾಗಿದ್ದು, ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.