ಭೀಕರ ಅಪಘಾತ: ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ಜಯನಗರ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ಬಳಿ ನಡೆದಿದೆ.

ಕೂಡ್ಲಗಿ ತಾಲೂಕಿನ ಹುಲಿಕೆರೆ ಕ್ರಾಸ್ ನಲ್ಲಿ ಈ ಅಪಘಾತ ಸಂಭವಿಸಿದೆ.

52 ವರ್ಷದ ಕೃಷ್ಣಪ್ಪ ಮೃತ ದುರ್ದೈವಿ. 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿಟಿ ವಾಹನದಲ್ಲಿದ್ದವರು ಕಲಬುರ್ಗಿಯಲ್ಲಿ ನಡೆದ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿಯಲ್ಲಿ ಒಟ್ಟು 16 ಪ್ರಯಾಣಿಕರಿದ್ದರು. ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟಿಟಿವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.ಕಾನಾಹೊಸಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories