ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಐವರು ಮೃತ್ಯು

ಮಧ್ಯಪ್ರದೇಶದ ಚಿತ್ರಕೂಟ ಜಿಲ್ಲೆಯ ಅಮನ್‌ಪುರದಲ್ಲಿ ವೇಗವಾಗಿ ಬಂದ ಟ್ರಕ್ ಇ-ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. ಮೊರೆನಾ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ್ದ ಮತ್ತೊಂದು ಅಪಘಾತದಲ್ಲಿ 30 ಜನ ಗಾಯಗೊಂಡಿದ್ದಾರೆ.

ಝಾನ್ಸಿ ಮಿರ್ಜಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ಈ ಘಟನೆ ನಡೆದಿದೆ. ಸದ್ಯ, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Latest Indian news

Popular Stories