Accident NewsChitradurga
ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಮೃತ್ಯು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮುಂದೆ ಚಲಿಸುತ್ತಿದ್ದ ಲಾರಿಗೆ ಅಶೋಕ್ ಲೈಲಾಂಡ್ ಗಾಡಿ ಡಿಕ್ಕಿಯಾಗಿ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ಹೊರವಲಯದ ಆರ್ ಕೆ ಪವರ್ ಜಿನ್ ಬಳಿ ಘಟನೆ ನಡೆದಿದೆ.
ಮೃತರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್ ( 55)ಹಾಗೂ ಬೆಳೆಗೆರೆ ಶಿವಲಿಂಗಪ್ಪ ( 65) ವರ್ಷ ಎಂದು ಗುರುತಿಸಲಾಗಿದೆ.