ಉಡುಪಿ: ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿ ಸವಾರ ಗಂಭೀರ ಗಾಯಗೊಂಡ ಘಟನೆ ರವಿವಾರ ಸಂಜೆ ಇಂದ್ರಾಳಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಮಣಿಪಾಲಕ್ಕೆ ಆಗಮಿಸುತ್ತಿದ್ದ ಖಾಸಗಿ ಎಕ್ಸ್ ಪ್ರೆ ಸ್ ಬಸ್ ಗೆ ಇಂದ್ರಾಳಿ ಡಿವೈಡರ್ ಬಳಿ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಬಸ್ ನ ಅಡಿ ಭಾಗಕ್ಕೆ ಹೋಗಿದೆ. ಘಟನಾ ಸ್ಥಳದಲ್ಲಿ ಕೆಲವು ಕಾಲ ಟ್ರಾಫಿಕ್ ದಟ್ಟನೆ ಉಂಟಾಯಿತು. ಮಣಿಪಾಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಸಂಚಾರ ದಟ್ಟನೆ ನಿಯಂತ್ರಿಸಿದರು.
ಗಾಯಾಳು ಬೈಕ್ ಸವಾರನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.