ಮದುವೆ ಮುಗಿಸಿ ಬರುತ್ತಿದ್ದವರು ಮಸಣಕ್ಕೆ: ಕಾರಿಗೆ ಟ್ರ್ಯಾಕ್ಟರ್‌ ಡಿಕ್ಕಿ, ಮೂವರು ಮಕ್ಕಳು ಸೇರಿದಂತೆ 7 ಮಂದಿ ಮೃತ್ಯು

ಪಾಟ್ನಾ: ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ನಡೆದಿದೆ.

ತುಟ್ಟಿ ಮೋಹನಪುರದಿಂದ ಮಾದಯ್ಯ ಬಿತ್ತಲ ಗ್ರಾಮಕ್ಕೆ ಕಾರು ಹಿಂದಿರುಗುತ್ತಿತ್ತು. ಎನ್‌ಎಚ್ 31ರ ವಿದ್ಯಾರತನ್ ಪೆಟ್ರೋಲ್ ಪಂಪ್​ ಸಮೀಪ ಟ್ರಾಕ್ಟರ್​ಗೆ ಡಿಕ್ಕಿ ಹೊಡೆದ ಕಾರು ರಸ್ತೆ ಬದಿಗೆ ಉರುಳಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರಲ್ಲಿ ಮೂವರು ಮಕ್ಕಳಿದ್ದಾರೆ ಎಂದು ಗೋಗ್ರಿಯ ಡಿಎಸ್​ಪಿಯ ರಮೇಶ್ ಕುಮಾರ್ ತಿಳಿಸಿದ್ದಾರೆ. ಇನ್ನೂ ನಾಲ್ಕು ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Latest Indian news

Popular Stories