ತುಮಕೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮೂವರು ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬೆಳ್ತಂಗಡಿ ಮೂಲದವರಾದ ಸಾಹುಲ್(೪೬) , ಇಸಾಕ್ (೫೪) ,ಇಮ್ತಿಯಾಝ್ (೩೪) ಕಾರಿನೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದವರು.
ಕುಚ್ಚಂಗಿ ಕೆರೆ ಬಳಿ ಕಾರೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಿನೊಳಗೆ ಮೂರು ಮೃತದೇಹಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರಿನ ಢಿಕ್ಕಿಯಲ್ಲಿ ಎರಡು ಮೃತದೇಹಗಳು ಹಾಗೂ ಹಿಂಬದಿಯ ಸೀಟಿನಲ್ಲಿ ಒಂದು ಮೃತದೇಹ ಪತ್ತೆಯಾಗಿದ್ದು, ಕೊಲೆ ನಡೆಸಿರುವುದಾಗಿ ಶಂಕಿಸಲಾಗಿದೆ.
ಮೂವರನ್ನು ಕೊಲೆಗೈದು ಕಾರಿನೊಳಗೆ ಹಾಕಿ ಕಾರಿಗೆ ಬೆಂಕಿ ಕೊಟ್ಟಿರಬಹುದೆಂದು ಶಂಕಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.