Udupi | ಅಜೆಕಾರಿನಲ್ಲಿ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಹಿಂದಕ್ಕೆ ಸಿಮೆಂಟ್ ಮಿಕ್ಸರ್ ವಾಹನ – ಸೂಪರ್ ವೈಸರ್ ಮೃತ್ಯು

ಅಜೆಕಾರು: ದಾರುಣ ಘಟನೆಯೊಂದರಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸರ್ ವಾಹನ ಏಕಾಏಕಿಯಾಗಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಸೂಪರ್ ವೈಸರ್ ಮೃತಪಟ್ಟಿದ್ದಾರೆ‌

ಪಡುಕುಡೂರು ಗ್ರಾಮದ ಕೊಡಮಣಿತ್ತಾಯ ದೇವಸ್ಥಾನವರೆಗಿನ ಮುಖ್ಯರಸ್ತೆಯ ಕಾಮಗಾರಿಯನ್ನು ನಿರ್ವಹಿಸುತ್ತಿರುವಾಗ ಹೊಸ ಸಿಮೆಂಟ್ ಮಿಕ್ಸರ್ ವಾಹನ ಹಿಂದಕ್ಕೆ ಚಲಾಯಿಸಿದ್ದು ಆ ವೇಳೆ ರಸ್ತೆಯಲ್ಲಿ ನಿಂತಿದ್ದ ಕಂಪನಿಯ ಸೂಪರವೈಸರ್‌ ಆದ ಭಾಷಿ ವೈ ಎನ್ನುವವರಿಗೆ ಡಿಕ್ಕಿ ಹೊಡೆದಿದೆ.

ವಾಹನದ ಚಕ್ರ ಅವರ ಮೇಲೆ ಹರಿದು ತೀವೃ ಗಾಯಗೊಂಡಿದ್ದು, ಕೂಡಲೇ ಗಾಯಾಳುವನ್ನು ಚಿಕಿತ್ಸೆ ಬಗ್ಗೆ ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡು ಹೋಗಿದ್ದು ಪರೀಕ್ಷಿಸಿದ ವೈದ್ಯರು ಭಾಷಿ ವೈ ರವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 11/2024 ಕಲಂ: 279 , 304(A) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Latest Indian news

Popular Stories