ಬಾಗಲಕೋಟೆಯಲ್ಲಿ ಒಂದೇ ದಿನ ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿ ಪ್ರಚಾರ ಸಾಧ್ಯತೆ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ದಿನವೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ.

ಏಪ್ರಿಲ್ 29ರಂದು ಬಾಗಲಕೋಟೆ ನಗರದಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶ ನಡೆಯಲಿದೆ. ಅದೇ ದಿನ ಬಾಗಲಕೋಟೆ ಜಿಲ್ಲೆ ಜಮಖಂಡಿಗೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರವಾಗಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 29ರಂದು ಬೆಳಿಗ್ಗೆ 11.20ಕ್ಕೆ ಬೆಳಗಾವಿಗೆ ಆಗಮಿಸಲಿರುವ ಅವರು ಬೆಳಗಾವಿಯಿಂದ ಜಮಖಂಡಿಗೆ ಹೆಲಿಕಾಪ್ಟರ್ ನಲ್ಲಿ ತೆರಳಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಜಮಖಂಡಿಗೆ ಆಗಮಿಸಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಬಳಿಕ ಬೆಳಗಾವಿ ಮಾರ್ಗವಾಗಿ ಕಲಬುರಗಿ ಕಡೆಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.

Latest Indian news

Popular Stories