ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತ ಮಹಿಳೆಗೆ ರಕ್ಷಣೆ- ಸಿಎಂ ಸಿದ್ಧರಾಮಯ್ಯ

ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲಾಗುತ್ತದೆ. ರಕ್ಷಣೆ ನೀಡುವಂತೆಯೂ ಪೊಲೀಸರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಮಹಿಳೆಯರಿಗೆ ರಕ್ಷಣೆ ಕೊಡುತ್ತದೆ ಎಂದು ಹೇಳುವ ಮೋದಿಯವರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಏನು ಮಾಡಿದ್ದಾರೆ ಎಂದು ಜಗಜ್ಜಾಹೀರಾಗಿದೆ.

ಇದು ತಿಳಿದಿದ್ದರೂ ಕೂಡ ಹೊಂದಾಣಿಕೆ ಮಾಡಿಕೊಂಡು ಅತ್ಯಾಚಾರ ಮಾಡಿರುವ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟಿದ್ದೀರಲ್ಲಾ? ಇದೇನಾ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡುವ ರೀತಿ ? ಅತ್ಯಾಚಾರಿಗಳಿಗೆ ರಕ್ಷಣೆ ಕೊಟ್ಟು, ಹೆಣ್ಣು ಮಕ್ಕಳಿಗೆ ಏನು ಸಂದೇಶ ನೀಡಿದ್ದೀರಿ ಎಂದು ಇಡೀ ರಾಜ್ಯದ ಜನ ಕೇಳುತ್ತಿದ್ದಾರೆ ಎಂದರು.

ಮೋದಿ ಬರೀ ಸುಳ್ಳು ಹೇಳುತ್ತಾರೆ. ಯಾವ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡಿಲ್ಲ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲದ ಮೇಲೆ ಅವರು ಪ್ರಧಾನಿ ಕುರ್ಚಿಯಲ್ಲಿ ಉಳಿಯಲು ಯೋಗ್ಯತೆ ಇಲ್ಲ ಎನ್ನಬೇಕಾಗುತ್ತದೆ ಎಂದರು.

Latest Indian news

Popular Stories