ಬೆಳಗಾವಿ: ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ಘಟನೆ ನಡೆದಿದ್ದು ಬೈಕ್ ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿದ್ದು ದಾಳಿಯಲ್ಲಿ ರವಿ ಕೋಕಿತಕರ್, ಕಾರು ಚಾಲಕ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ರವಿ ಕೋಕಿತಕರ್ ಹಾಗೂ ಕಾರು ಚಾಲಕ ಮನೋಜ್ ದೇಸೂರಕರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್ ನಲ್ಲಿ ಕಾರು ನಿಧಾನ ಮಾಡಿಗಾ ಅಪರಿಚಿತರು ಗುಂಡು ಹಾರಿಸಿದ್ದರು. ಗುಂಡು ರವಿ ಗದ್ದಕ್ಕೆ ತಗುಲಿ ನಂತರ ಚಾಲಕನ ಕೈಗೆ ಬುಲೆಟ್ ತಗುಲಿದೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನೆಯನ್ನು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರವಾಗಿ ಖಂಡಿಸಿದ್ದು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.
ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಡಿಸಿಪಿ ರವೀಂದ್ರ ಗಡಾದಿ, ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಖಾಸಗಿ ಆಸ್ಪತ್ರೆ ಬಳಿ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಇನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್ ಆಸ್ಪತ್ರೆಗೆ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.