ರಾಜ್ಯದಲ್ಲಿ ʻಡೆಂಗ್ಯೂ ಜ್ವರʼಕ್ಕೆ ಮತ್ತೊಂದು ಬಲಿ : ಬೆಳಗಾವಿಯಲ್ಲಿ 11 ವರ್ಷದ ಬಾಲಕಿ ಸಾವು!

ಬೆಳಗಾವಿ : ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಮುಂದುವರೆದಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇ‍ಶ್ವರದ 11 ವರ್ಷದ ಶ್ರೇಯಾ ಕೃಷ್ಣಾ ದೇವದಾತೆ ಎಂಬ ಬಾಲಕಿ ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾಳೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಶ್ರೇಯಾಳನ್ನು ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಡಿಹೆಚ್‌ ಒ ಮಹೇಶ್‌ ಕೋಣಿ ಮಾಹಿತಿ ನೀಡಿದ್ದಾರೆ.

Latest Indian news

Popular Stories