ಬೆಳಗಾವಿಯಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ; ಪೊಲೀಸರಿಂದ ಲಾಠಿ ಚಾರ್ಜ್

ಬೆಳಗಾವಿ : ಬೆಳಗಾವಿಯಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಬೆಳಗಾವಿಯ ಪಾಟೀಲ ಗಲ್ಲಿಯಲ್ಲಿ ಘಟನೆ ನಡೆದಿದೆ. ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನಡೆದ ಬಳಿಕ ಯುವಕರ ಗುಂಪೊಂದು ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಮೆರವಣಿಗೆ ಹೊರಟಿತ್ತು, ಈ ಗುಂಪಿನ ಮೇಲೆ ಮತ್ತೊಂದು ಗುಂಪಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ.

ಪರಿಣಾಮ ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ತೂರಾಟ ನಡೆದ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಯಿತು. ಸ್ಥಳದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರಿಂದ ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories