ಬೆಳಗಾವಿ: ಬಿಜೆಪಿ ಅಭ್ಯರ್ಥಿ ಮಂಗಲಾ ನಾಮಪತ್ರ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಗೂ ಉತ್ತರ ಮತಕ್ಷೇತ್ರದ ಅನಿಲ ಬೆನಕೆ ಜೊತೆಗಿದ್ದರು.
ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರ ಸ್ವೀಕರಿಸಿದರು. ನಾಮಪತ್ರ ಸಲ್ಲಿಸುವಾಗ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಗೂ ಉತ್ತರ ಮತಕ್ಷೇತ್ರದ ಅನಿಲ ಬೆನಕೆ ಜೊತೆಯಲ್ಲಿದ್ದರು.

Latest Indian news

Popular Stories