ಬಿಜೆಪಿ ಭ್ರಷ್ಟಪಕ್ಷ’ ಎಂದು ಲೇಬಲ್ ಕೊಟ್ಟಿದ್ದೆ ಬಿ ವೈ ವಿಜಯೇಂದ್ರ : ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ ಇಲ್ಲ. ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ.

ಬಿಜೆಪಿ ಭ್ರಷ್ಟ ಪಕ್ಷ ಎಂದು ಲೇಬಲ್ ಕೊಟ್ಟಿದ್ದೆ ಬಿ ವೈ ವಿಜಯೇಂದ್ರ ಎಂದು ಗಂಭೀರವಾದ ಆರೋಪ ಮಾಡಿದರು.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವನು ಅಧ್ಯಕ್ಷ ಆಗಿದ್ದಕ್ಕೆ ನನಗೆ ವಿರೋಧವಿದೆ. ಹಾಗಂತ ನಾನೆಂದೂ ಯಡಿಯೂರಪ್ಪ ಅವರಿಗೆ ವಿರೋಧಿ ಅಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಏಕವಚನದಲ್ಲೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ.

ಯಡಿಯೂರಪ್ಪನವರ ಬಗ್ಗೆ ನಮಗೆ ಬಹಳ ಗೌರವವಿದೆ. ಯಡಿಯೂರಪ್ಪಗೆ ವಯಸ್ಸಾಗಿದೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ನಮಗೆ ಯಡಿಯೂರಪ್ಪನವರ ಸಲಹೆ ಬೇಕಾದರೆ ಅವರ ಮನೆಗೆ ಹೋಗುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

Latest Indian news

Popular Stories