ಬೆಳಗಾವಿ ಅಧಿವೇಶನ: ವಿರೋಧ ಪಕ್ಷದವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ | ಅವರ ಎಲ್ಲ ಪ್ರಶ್ನೆಗೂ ಉತ್ತರ ನೀಡಲು ಸರ್ಕಾರ ಸಿದ್ಧವಿದೆ – ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಳಗಾವಿ: ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನ ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ವಿಮಾನ ಸುದ್ದಿಗಾರ ಜೊತೆಗೆ ಮಾತನಾಡಿದ ಅವರು ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯವರೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಎಂದಿಗೂ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿಲ್ಲ. ಬದಲಾಗಿ ಬಡಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ಇವುಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು ಎಂದರು.

ಈ ಬಾರಿ ವಿರೋಧ ಪಕ್ಷದವರು ಜಂಟಿಯಾಗಿ ಹೋರಾಟ ಕೈಗೊಳ್ಳಲಿರುವ ಬಗ್ಗೆ ಪ್ರತಿಕ್ರಯಿಸಿದ ಅವರು ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಿರಲಿಲ್ಲ. ವಿರೋಧ ಪಕ್ಷದವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಅವರು ಜಂಟಿಯಾಗಿ ಹೋರಾಟ ನಡೆಸಿದರೂ, ಅವರ ಎಲ್ಲ ಹೋರಾಟಗಳಿಗೆ ಉತ್ತರ ನೀಡಲು ಸರ್ಕಾರ ಸಿದ್ಧವಿದೆ ಎಂದು ತಿರುಗೇಟು ನೀಡಿದರು.

Latest Indian news

Popular Stories