ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ, ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ ಗರಂ

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿ ಶಾಸಕಾರಾದ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಹೆಚ್.ವಿಶ್ವನಾಥ್ ಭಾಗಿಯಾದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗರಂ ಆಗಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿಯ ಕೆಲ ಶಾಸಕರು ಭಾಗಿಯಾಗಿರುವುದು ಗಂಭೀರ ವಿಚಾರ . ಇಂದೇ ಅವರನ್ನು ಕರೆದು ಚರ್ಚಿಸುತ್ತೇನೆ ಎಂದು ಗರಂ ಆಗಿದ್ದಾರೆ.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ, ಸಿದ್ದರಾಮಯ್ಯಗೆ ರಾಜಕೀಯ ಪುನರ್ಜನ್ಮ ನೀಡಿದ್ದು ಬಾದಾಮಿ ಕ್ಷೇತ್ರ. ಅಲ್ಪಸಂಖ್ಯಾತರಿಗೆ ಹತ್ತು ಸಾವಿರ ಕೋಟಿ ಕೊಡುತ್ತೇನೆ ಎಂದಿದ್ದಾರೆ. ಅಲ್ಪಸಂಖ್ಯಾತರಿಗೆ ಹಣ ಕೊಡುವವರಿಗೆ ರೈತರ ಬಗ್ಗೆ ಯಾಕೆ ಕಾಳಜಿ ಇಲ್ಲ? ನೀವು ಅಲ್ಪಸಂಖ್ಯಾತರ ವೋಟಿನಿಂದ ಮಾತ್ರ ಅಧಿಕಾರಕ್ಕೆ ಬಂದಿದ್ದೀರಾ? ಜವಾಬ್ದಾರಿಯುತ ಸ್ಥಾನದಲ್ಲಿದ್ದು ಸಿಎಂ ಕ್ರಮವನ್ನು ಖಂಡಿಸುತ್ತೇನೆ ಎಂದು ಗುಡುಗಿದ್ದಾರೆ.

Latest Indian news

Popular Stories