ತಡರಾತ್ರಿ ಸಿಲಿಂಡರ್ ಸ್ಪೋಟ: 9 ತಿಂಗಳ ಮಗು ಸೇರಿ ಒಂದೇ ಕುಟುಂಬದ 7 ಜನರು ಗಂಭೀರ ಗಾಯ

ಬೆಳಗಾವಿ (ಡಿ.17) :ತಡರಾತ್ರಿ ಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ 7 ಜನರು ಗಂಭೀರ ಗಾಯಗೊಂಡದ್ದಾರೆ.

ಗಾಯಗೊಂಡಿರುವವರನ್ನು ರಾಜಶ್ರೀ ನಿರ್ವಾಣಿ (42) ಅಶೋಕ ನಿರ್ವಾಣಿ (45) ಸೋಮನಗೌಡ (44) ದೀಪಾ (42) ನವೀನ (14), ವಿದ್ಯಾ (13) ಬಸನಗೌಡ ನಿರ್ವಾಣಿ( 9 ತಿಂಗಳು)ಗಾಯಗೊಂಡಿರುವವರು.

ನಿನ್ನೆ ರಾತ್ರಿ ಅಡುಗೆ ತಯಾರಿಸಿ ಊಟ ಮಾಡಿ ಲೈಟ್ ಆಫ್ ಮಾಡಿ ಮಲಗಿರುವ ಕುಟುಂಬ ಮಧ್ಯರಾತ್ರಿ ಗ್ಯಾಸ್ ಸೋರಿಕೆ ಆಗಿರೋ ವಾಸನೆ ಬಂದಿದೆ. ಹೀಗಾಗಿ ಅಡುಗೆ ಮನೆಯಲ್ಲಿ ಗ್ಯಾಸ್ ಇಟ್ಟಕ್ಕೆ ಜಾಗಕ್ಕೆ ತೆರಳಲು ಮೊಬೈಲ್ ಬ್ಯಾಟರಿ ಆನ್ ಮಾಡಿದ್ದಾರೆ ಗ್ಯಾಸ್ ಬಳಿ ಹೋದಾಗ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ.

ಸಿಲಿಂಡರ್ ಸ್ಪೋಟದ ರಭಸಕ್ಕೆ ಹಾರಿಹೋದ ಮನೆಯ ಹಂಚುಗಳು. ಚೆಲ್ಲಾಪಿಲ್ಲಿಯಾಗಿ ಬಿದ್ದ ಮನೆಯಲ್ಲಿನ ವಸ್ತುಗಳು. ಮಲಗಿದ್ದ ಕುಟುಂಬ ಸ್ಫೋಟದ ರಭಸಕ್ಕೆ ಬೆಚ್ಚಿಬಿದ್ದಿದೆ. ವಸ್ತುಗಳು ಸಿಡಿದು ಕುಟುಂಬದ ಎಲ್ಲರೂ ಗಾಯಗೊಂಡಿದ್ದಾರೆ.

Latest Indian news

Popular Stories