ಕೆ.ಎಸ್.ಆರ್.ಟಿ.ಸಿ ಬಸ್-ಕಾರು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ಈ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಿರೀಶ್, ರಾಹುಲ್ ಹಾಗೂ ಸಂಗು ಮೃತ ದುರ್ದೈವಿಗಳು. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಅಫಜಲಪುರ ಮೂಲದವರು ಎಂದು ತಿಳಿದುಬಂದಿದೆ. ದೇವರ ದರ್ಶನಕ್ಕೆಂದು ಹೋದವರು ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

Latest Indian news

Popular Stories