ಶಾಸಕ ರಮೇಶ ಜಾರಕಿಹೊಳಿಗೆ ಕೋವಿಡ್

ಬೆಳಗಾವಿ: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಗೋಕಾಕದ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ ಅಂಟಿನ ತಿಳಿಸಿದರು.
ಗೋಕಾಕ ಆಸ್ಪತ್ರೆಯಲ್ಲಿ ಸೋಮವಾರ ಪತ್ರಕರ್ತರಿಗೆ ಮಾಹಿತಿ ನೀಡಿದ ಅವರು, ಜ್ವರ ಮತ್ತು ಕೆಮ್ಮು ಇದೆ ಎಂದಿದ್ದರು. ಅವರನ್ನು ರ‍್ಯಾಪಿಡ್ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್-19 ಬಂದಿರುವುದು ದೃಢಪಟ್ಟಿದೆ ಎಂದು ತಿಳಿಸಿದರು.
ಚಿಕಿತ್ಸೆ ನೀಡಿದ್ದ ವೈದ್ಯರು, ಮನೆಯಲ್ಲಿ ಪ್ರತ್ಯೇಕವಾಗಿ ಇರುವಂತೆ ಅವರಿಗೆ ತಿಳಿಸಿ ಕಳುಹಿಸಿದ್ದರು. ಭಾನುವಾರ ರಾತ್ರಿ 10.30ರ ಸುಮಾರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿAದ ಆಸ್ಪತ್ರೆಗೆ ಬಂದಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ’ ಎಂದು ಹೇಳಿದರು.
ಸದ್ಯಕ್ಕೆ ಐಸಿಯುನಲ್ಲಿದ್ದಾರೆ. ಆರೋಗ್ಯ ಈಗ ಸ್ಥಿರವಾಗಿದೆ. ಸುಸ್ತಾಗುತ್ತಿದೆ ಎಂದು ಹೇಳಿದ್ದಾರೆ. ಕೋವಿಡ್ ಮಾರ್ಗಸೂಚಿ ಪ್ರಕಾರ, ಮುಂದಿನ ನಾಲ್ಕೈದು ದಿನಗಳವರೆಗೆ ಆಸ್ಪತ್ತೆಯಲ್ಲೇ ಇರಬೇಕಾಗುತ್ತದೆ. ಆರೋಗ್ಯ ಸ್ಥಿತಿ ಸುಧಾರಿಸಿದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

Latest Indian news

Popular Stories