ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು (murder Case) ಬಲಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ದುರ್ದೈವಿ. ಜೋತಿಭಾ ತುಕಾರಾಮ ಬಾಬಾಬರ ಕೊಲೆ ಆರೋಪಿ.

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾರೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Latest Indian news

Popular Stories