ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಲ್ಲೇಖಿತ ಸರ್ಕಾರದ ನಿರ್ದೇಶನಗಳಂತೆ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5 ಮತ್ತು 26(2) ಹಾಗೂ 12(ಎ) (ಬಿ) ಮತ್ತು (ಸಿ) ಅನ್ವಯ ಸದರಿ ಹುದ್ದೆಯನ್ನು ಹೊಸದಾಗಿ ತುಂಬಲು ಅರ್ಹ ವಕೀಲರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಕೀಲರು ತಮ್ಮ ವಿದ್ಯಾರ್ಹತೆಗೆ ಸಂಬAಧಿಸಿದ ಪದವಿ ಹಾಗೂ ಕಾನೂನು ಪದವಿಗೆ ಸಂಬAಧಪಟ್ಟ ದಾಖಲೆಗಳನ್ನು ದೃಢೀಕರಿಸಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಕೀಲರು ಕನಿಷ್ಠ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ದಾಖಲೆಗಳನ್ನು ಸಲ್ಲಿಸಬೇಕು. ಸದರಿ ಅರ್ಜಿಗಳನ್ನು 15ದಿನಗಳ ಒಳಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಲ್ಲಿಸುವಂತೆ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ ಅಥವಾ ದೂ:08392-277100 ಸಂಪರ್ಕಿಸಬಹುದು.

Latest Indian news

Popular Stories