bellary

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅಧಿಕಾರ ಸ್ವೀಕಾರ

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.

ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಸಭಾಂಗಣದಲ್ಲಿ ನೂತನ ಮೇಯರ್ ಆದ ಬಿ.ಶ್ವೇತಾ ಅವರು ದಾಖಲಾತಿಯಲ್ಲಿ ಸಹಿ ಹಾಕುವುದರ ಮೂಲಕ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ಸಾಬ್ ಅವರು ಹೂ ಗುಚ್ಛ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಹಾಜರಿದ್ದರು.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button