ಬಳ್ಳಾರಿ : ಬಳ್ಳಾರಿಯಲ್ಲಿ ಮನೆ ಮೇಲ್ಚಾವಣಿ ಕುಸಿದು ದುರಂತ ಸಂಭವಿಸಿದ್ದು, ಓರ್ವ ವೃದ್ಧ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿ ತೆಕ್ಕಲಕೋಟೆಯಲ್ಲಿ ಮನೆಯ ಮೇಲ್ಚಾವಣಿ ಕುಸಿದು ಮನೆಯಲ್ಲಿದ್ದ ವೃದ್ದ ಬೆಲ್ಲದ ಸಿದ್ದಪ್ಪ (೬೦) ಹಾಗೂ ಮೊಮ್ಮಕಳಾದ ಕೀರ್ತಿ, ಲಕ್ಷ್ಮೀ, ಮುತ್ತುರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ಮೂವರನ್ನು ಸ್ಥಳೀಯ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.