ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸರಳ ಆಚರಣೆ ಏ.೧೪ರಂದು

ಬಳ್ಳಾರಿ, ಏ.೧೨(ಕರ್ನಾಟಕ ವಾರ್ತೆ):ಸರ್ಕಾರದ ಆದೇಶದಂತೆ ಕೋವಿಡ್-೧೯ ಕರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಏ.೧೪ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.

ಅಂಬೇಡ್ಕರ್ ರವರ ೧೩೦ನೇ ಜಯಂತ್ಯೋತ್ಸವವನ್ನು ಜಿಲ್ಲಾಡಳಿತದ ವತಿಯಿಂದ ಬೆಳಿಗ್ಗೆ ೯:೩೦ಕ್ಕೆ ಡಾ.ಬಿ.ಆರ್.

ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಪ್ಪ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಂಡು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನಾಚಾರಣೆಯಲ್ಲಿ ಭಾಗವಹಿಸಲು ಅವರು ಮನವಿ ಮಾಡಿದ್ದಾರೆ.

Latest Indian news

Popular Stories