ಅಲ್ಪಸAಖ್ಯಾತ ಮೊರಾರ್ಜಿ ದೇಸಾಯಿ ಬಾಲಕಿಯರ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಬಳ್ಳಾರಿ,ಜು.22(ಕರ್ನಾಟಕ ವಾರ್ತೆ): 2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗುಗ್ಗರಟ್ಟಿಯ ಸರ್ಕಾರಿ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಶೇ.100ರಷ್ಟು ಫಲಿತಾಂಶ ಪಡೆದಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಯು.ಎಂ.ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ರೇಣುಕಕಮ್ಮ ಎಂ.ಜಿ 590 (98.33%) ಅಂಕಗಳು ಪಡೆದು ಪ್ರಥಮ ಸ್ಥಾನ ಪಡೆದಿದ್ದು, 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಕಾವ್ಯಾಂಜಲಿ 582 (97%) ಅಂಕಗಳು ಪಡೆದು ಪ್ರಥಮ ಸ್ಥಾನ ಪಡೆದಿದ್ದು, 9 ವಿದ್ಯಾರ್ಥಿಗಳು ಡಿಸ್ಟ್ಟಿಂಕ್ಷನ್ ಹಾಗೂ 19 ವಿದ್ಯಾರ್ಥಿಗಳು ಪ್ರಥಮ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಈ ಫಲಿತಾಂಶಕ್ಕೆ ಕಾರಣಿಕರ್ತರಾದ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ,ಉಪನ್ಯಾಸಕರಿಗೆ,ವಿದ್ಯಾರ್ಥಿಗಳಿಗೆ ಮತ್ತು ಬೋಧಕೇತರ ವರ್ಗದವರಿಗೂ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Latest Indian news

Popular Stories