ಬಳ್ಳಾರಿ ಮೇಯರ್ ಆಗಿ ಮುಲ್ಲಂಗಿ ನಂದೀಶ್, ಉಪಮೇಯರ್ ಆಗಿ ಡಿ. ಸುಕುಂ ಆಯ್ಕೆ

ಬಳ್ಳಾರಿ: ಬಳ್ಳಾರಿ ಪಾಲಿಕೆಯ 23ನೇ ಮೇಯರ್‌ ಆಗಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ಕಾಂಗ್ರೆಸ್ ನ ಮುಲ್ಲಂಗಿ ನಂದೀಶ್ ಬಾಬು ಆಯ್ಕೆಯಾಗಿದ್ದಾರೆ ಉಪ ಮೇಯರ್‌ ಆಗಿ ಡಿ. ಸುಕುಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ವರ್ಗಕ್ಕೆ ಮೇಯರ್‌ ಸ್ಥಾನ ಮೀಸಲಾಗಿದ್ದರೆ, ಉಪ ಮೇಯರ್‌ ಸ್ಥಾನ ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಇನ್ನು ಮೇಯರ್ ಆಗಿ ಆಯ್ಕೆಯಾಗಿರುವ ನಂದೀಶ್ ಪಾಲಿಕೆಯ 18ನೇ ವಾರ್ಡಿನ್ ಕಾಂಗ್ರೆಸ್ ಸದಸ್ಯ. ಉಪಮೇಯರ್ ಸುಕುಂ 26ನೇ ವಾರ್ಡ್ ಸದಸ್ಯೆಯಾಗಿದ್ದಾರೆ.

ಬಿಜೆಪಿಯಿಂದ ಶ್ರೀನಿವಾಸ್‌ ಮೋತ್ಕರ್ ಮೇಯ‌ರ್ ಸ್ಥಾನಕ್ಕೆ ಸ್ಪರ್ಧಿಸಿದ್ದರೆ, ಉಪಮೇಯರ್ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ.

Latest Indian news

Popular Stories