ಬಳ್ಳಾರಿ : ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದಲ್ಲದೆ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಆರ್.ಹೆಬ್ಬಾಳಕರ್ ಅವರು ಹೇಳಿದ್ದಾರೆ.
ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಅಂಗನವಾಡಿ ಉನ್ನತಿಕರಣದಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ, ಆರೋಗ್ಯ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು.