ಕೋಮುವಿಷ ಬೀಜ ಬಿತ್ತಿದ ತೇಜಸ್ವಿ ಸೂರ್ಯನಿಗೆ ಟ್ವಿಟ್ಟರ್ ನಲ್ಲಿ ಪಾಠ ಮಾಡಿದ ಸಿದ್ದರಾಮಯ್ಯ

ಕೋಮುವಿಷ ಬೀಜ ಬಿತ್ತಿದ ತೇಜಸ್ವಿ ಸೂರ್ಯರನ್ನು ಸರಣಿ ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅವರ ಟ್ವೀಟ್ ಗಳು ಈ ಕೆಳಗಿನಂತಿದೆ

ತೇಜಸ್ವಿ ಸೂರ್ಯ, ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ,
ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು BBMPಯ ಅಧಿಕಾರಿಗಳ ವಿರುದ್ಧವಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ,‌ ಸಚಿವರು ಮತ್ತು
ಬಿಜೆಪಿಯ ಶಾಸಕರು‌,ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ?

ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ‌ ಹೈಕೋರ್ಟ್ ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಲು
ಮುಖ್ಯಮಂತ್ರಿಗಳಿಗೆ ಮೇಲೆ ಒತ್ತಡ ಹೇರಿ.

ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು.

ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ.

ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ
ಮುಖ್ಯಮಂತ್ರಿ ಮತ್ತು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ.

‘ಯಥಾ ರಾಜಾ ತಥಾ‌ ಮಂತ್ರಿ’. ‘ಮೈ ಬೀ ಕಾವೂಂಗಾ, ತುಮ್ ಬಿ ಕಾವೋ’ ಎನ್ನುವುದೇ ನಿಮ್ಮ
ನರೇಂದ್ರ ಮೋದಿಯವರ ಅವರ ನಿಜವಾದ ಘೋಷಣೆ.‌ ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಅಲ್ಲವೇ.

ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪ‌ಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳನ್ನು‌ ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ.

ಕೋವಿಡ್ ನಿರ್ವಹಣೆಯಲ್ಲಿ‌ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದು ಕಟ್ಟೆ ಹಾಕಿದೆ‌‌ ಅದನ್ನೂ ರಾಜ್ಯದ ಜನತೆಗೆ ತಿಳಿಸಿ

Latest Indian news

Popular Stories