ಬೆಂಗಳೂರಲ್ಲಿ ನೇಣು ಬಿಗಿದುಕೊಂಡು 21 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಲ್ಲಿ ನಿನ್ನೆ ಸಂಜೆ ನಡೆದಿದೆ.

ಬೆಂಗಳೂರಿನ ಸುಧಾಮನಗರದಲ್ಲಿ ಈ ಘಟನೆ ನಡೆದಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ 21 ವರ್ಷ ವಯಸ್ಸಿನ ವರ್ಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಜಯನಗರದ ಕಮ್ಯುನಿಟಿ ಕಾಲೇಜಿನಲ್ಲಿ ಈಕೆ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories