ʻಗ್ಯಾರಂಟಿ ಯೋಜನೆʼಗಳ ಸಮೀಕ್ಷೆಗೆ ʻCMʼ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು.

ರಾಜ್ಯದಲ್ಲಿ 84,52,317 ಕುಟುಂಬಗಳ ಸುಮಾರು 5 ಕೋಟಿ ಜನರ ಸಮೀಕ್ಷೆ ನಡೆಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ರಾಜ್ಯದಲ್ಲಿ 4,37,23,911 ಜನರು ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿದ್ದು, ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಅಡಿಯಲ್ಲಿವೆ. 1.27 ಕೋಟಿ ಬಿಪಿಎಲ್ ಕುಟುಂಬಗಳಿವೆ. ಹೊಸ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿ ಬಾಕಿಯಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್ ಕಾರ್ಡ್ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ತಮಿಳುನಾಡಿನಲ್ಲಿ ಬಿಪಿಎಲ್ ಪ್ರಮಾಣ ಶೇ. 40ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕಾರ್ಯ ನಡೆಯಬೇಕು. ಇದೇ ರೀತಿ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಹೇಳಿದ್ದಾರೆ.

Latest Indian news

Popular Stories