ತೆರಿಗೆ ಭಯೋತ್ಪಾದನೆ” ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ : ಸಿಎಂ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ”ತೆರಿಗೆ ಭಯೋತ್ಪಾದನೆ”ಯಲ್ಲಿ ತೊಡಗಿದೆ.

ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ.
ಕಾಂಗ್ರೆಸ್ ಪಕ್ಷದ ಮೇಲೆ ವರಮಾನ ತೆರಿಗೆ ಪಾವತಿ ಮಾಡದೆ ಇರುವಆರೋಪ ಹೊರಿಸಿ ರೂ.1823 ಕೋಟಿ ಪಾವತಿಸುವಂತೆ ಐಟಿ ಇಲಾಖೆ ನೋಟೀಸ್ ನೀಡಿದೆ.

2017-18ರಲ್ಲಿ ಬಿಜೆಪಿ ಹೆಸರೇ ಇಲ್ಲದ 92 ದಾನಿಗಳಿಂದ ರೂ.4.5 ಲಕ್ಷ ಮತ್ತು ವಿಳಾಸವೇ ಇಲ್ಲದ 1297 ದಾನಿಗಳಿಂದ ರೂ.42 ಕೋಟಿ ದೇಣಿಗೆ ಪಡೆದಿರುವುದನ್ನು ನಮ್ಮ ಪಕ್ಷದ ನಾಯಕರು ಬಯಲಿಗೆಳೆದಿದ್ದಾರೆ. ನಮ್ಮ ಪಕ್ಷಕ್ಕೆ ಅನ್ವಯಿಸಿದ ಮಾನದಂಡವನ್ನೇ ಅನ್ವಯಿಸಿದರೆ ಬಿಜೆಪಿ ಕಳೆದ ಏಳು ವರ್ಷಗಳಲ್ಲಿ ನಡೆಸಿರುವ ತೆರಿಗೆ ಉಲ್ಲಂಘನೆಗಾಗಿ ರೂ.4263 ಕೋಟಿ ಪಾವತಿಸಬೇಕಾಗಿದೆ.

ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅತಿಕ್ರಿಯಾಶಾಲಿಯಾಗಿರುವ ಐಟಿ ಇಲಾಖೆ ಟಿಎಂಸಿ, ಸಿಪಿಐ ಸೇರಿದಂತೆ ಬೇರೆ ವಿರೋಧಪಕ್ಷಗಳ ಮೇಲೆಯೂ ತೆರಿಗೆ ಭಯೋತ್ಪಾದನೆಯ ಅಸ್ತ್ರ ಪ್ರಯೋಗ ಮಾಡಿದೆ. ವಿರೋಧ ಪಕ್ಷಗಳ ಮೇಲೆ ಮುಗಿ ಬಿದ್ದಿರುವ ಐಟಿ ಇಲಾಖೆ ಬಿಜೆಪಿಯ ತೆರಿಗೆ ಉಲ್ಲಂಘನೆ ಬಗ್ಗೆ ಮಾತ್ರ ಕುರುಡಾಗಿದೆ. ಐಟಿ ಇಲಾಖೆಯ ಕಣ್ಣಿಗೆ ಬಟ್ಟೆ ಕಟ್ಟಿರುವವರು ಯಾರು ಎನ್ನುವುದನ್ನು ತಿಳಿಯದಷ್ಟು ದೇಶದ ಜನತೆ ದಡ್ಡರಲ್ಲ.

ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ಡೈರಿಗಳೆಂದು ಹೇಳಲಾದ ದಾಖಲೆಪತ್ರಗಳನ್ನು ಮುಂದಿಟ್ಟುಕೊಂಡು ತೆರಿಗೆ ಉಲ್ಲಂಘನೆಯ ಆರೋಪ ಮಾಡುತ್ತಿರುವ ಐಟಿ ಇಲಾಖೆಗೆ, ಕರ್ನಾಟಕದಲ್ಲಿಯೇ ಬಯಲಾಗಿದ್ದ ಯಡಿಯೂರಪ್ಪ ಡೈರಿಗಳಾಗಲಿ, ನರೇಂದ್ರಮೋದಿಯವರೂ ಫಲಾನುಭವಿ ಎಂದು ಆರೋಪಿಸಲಾಗಿರುವ ”ಬಿರ್ಲಾ-ಸಹಾರಾ” ಡೈರಿಯಾಗಲಿ ಯಾಕೆ ಕಣ್ಣಿಗೆ ಬಿದ್ದಿಲ್ಲ?

ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣಾ ಬಾಂಡ್ ಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳನ್ನು ಆಡಳಿತಾರೂಡ ಬಿಜೆಪಿ ಸುಲಿಗೆ ಮಾಡಿರುವುದು ಜಗಜ್ಜಾಹೀರಾಗಿದೆ. ಬಯಲಾಗಿರುವ

Latest Indian news

Popular Stories