ಬೆಂಗಳೂರಿನಲ್ಲಿ ಜೋಡಿ ಕೊಲೆ: ಹಾಡುಹಗಲೇ ಏರೋನಿಕ್ಸ್ ಕಂಪನಿ ಸಿಇಒ, ಎಂಡಿ ಬರ್ಬರ ಹತ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಮೃತಹಳ್ಳಿಯಲ್ಲಿ ಹಾಡುಹಗಲೇ ಜೋಡಿ ಕೊಲೆ ನಡೆದಿದ್ದು, ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ಹಾಗೂ ಎಂಡಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ವಿನುಕುಮಾರ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಫಣಿಂದ್ರ ಸುಬ್ರಹ್ಮಣ್ಯ ಅವರನ್ನು ತಲ್ವಾರ್ ನಿಂದ ಚುಚ್ಚಿ, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಇಂದು ಸಂಜೆ 4 ಗಂಟೆಯ ಸುಮಾರಿಗೆ ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ಕೃತ್ಯ ಎಸಗಿದ್ದು, ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Latest Indian news

Popular Stories