22 ಕ್ಕೂ ಹೆಚ್ಚು ಮನೆಗಳಲ್ಲಿ ಅಗ್ನಿ ಅವಘಡ.. ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮ..!

ನೆಲಮಂಗಲ :-ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೇಗೂರು ಸಮೀಪದ ಅಗಸರಹಳ್ಳಿ ಗ್ರಾಮದಲ್ಲಿ ವಿದ್ಯುತ್ ಏರಿಳಿತದಿಂದಾಗಿ 7ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿನ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ಆಗಮಿಸಿದ್ದಾರೆ.

ಮಹೇಶ್ ಎಂಬುವವರು ಸೇರಿದಂತೆ ಒಟ್ಟು 7 ಜನರ ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Latest Indian news

Popular Stories