ಕೆ.ಸಿ ಜನರಲ್ ಆಸ್ಪತ್ರೆ’ಯನ್ನು ‘ಜನಪರ ಆಸ್ಪತ್ರೆ’ಯನ್ನಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ:ದಿನೇಶ್ ಗುಂಡೂರಾವ್

ಬೆಂಗಳೂರು: ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು. 35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 50 ಬೆಡ್ ಸಾಮರ್ಥ್ಯದ ಟ್ರಾಮಾ ಸೆಂಟರ್ ಕಾಮಗಾರಿಯನ್ನ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದರು.

ಅಲ್ಲದೇ ಆಸ್ಪತ್ರೆಗೆ ತುರ್ತು ಚಿಕಿತ್ಸಾ ಘಟಕವನ್ನ ನೂತನವಾಗಿ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆ ನಡೆಸಿದರು.

ಕೆ.ಸಿ ಜನರಲ್ ಆಸ್ಪತ್ರೆಗೆ ಕಾಯಕಲ್ಪ ಒದಗಿಸುವ 150 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕೆ.ಸಿ ಜನರಲ್ ಜನಪ್ರೀಯ ಆಸ್ಪತ್ರೆಯನ್ನಾಗಿ ರೂಪಿಸಲು ಎಲ್ಲರು ಶ್ರಮ ವಹಿಸಬೇಕು ಎಂದರು. ಕೆ.ಸಿಜನರಲ್ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ 66.78 ಕೋಟಿ ವೆಚ್ಚದಲ್ಲಿ 200 ಬೆಡ್ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಕಾಮಗಾರಿ ಪ್ರಾರಂಭಿಸುವ ನಿಟ್ಟಿನಲ್ಲಿ ಗುದ್ದಲಿ ಪೂಜೆಗೆ ಅಣಿ ಮಾಡಿಕೊಳ್ಳಲು ಸಚಿವರು ಸೂಚನೆ ನೀಡಿದರು.

ಆಸ್ಪತ್ರೆಗೆ ಬರುವ ರೋಗಿಗಳು ಔಷಧಿಗಾಗಿ ಬೇರೆಕಡೆ ಹೋಗುವ ಸ್ಥಿತಿ ಬರಬಾರದು ಎಂದು ಖಡಕ್ ವಾರ್ನಿಂಗ್ ನೀಡಿದ ಸಚಿವರು, ಆಸ್ಪತ್ರೆಯ ಮಳಿಗೆಗಳಲ್ಲಿ ಇರುವ ಔಷಧಿ ಕೇಂದ್ರಗಳಿಗೆ ಗೇಟ್ ಪಾಸ್ ನೀಡಿ. ಸರ್ಕಾರಿ ಔಷಧಿಯ ಅಂಗಡಿಯನ್ನೇ ಮಧ್ಯರಾತ್ರಿಯ ವರೆಗೂ ತೆರೆಯಲು ಅಗತ್ಯ ಸಿಬ್ಬಂದಿಗಳನ್ನ ನೇಮಿಸಿಕೊಳ್ಳಲು ಸೂಚನೆ ನೀಡಿದರು. ಅಲ್ಲದೇ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಘಟಕ ಕೂಡ ರಾತ್ರಿ 10 ಗಂಟೆಯ ವರೆಗೆ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸಲಹೆ ನೀಡಿದರು.

Latest Indian news

Popular Stories