ರಾಜ್ಯಾದ್ಯಂತ 4,364 ಡೆಂಗ್ಯೂ ಪ್ರಕರಣಗಳು ಪತ್ತೆ : ಸಾರ್ವಜನಿಕರು ತಪ್ಪದೇ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿದ್ದು, ಆರು ತಿಂಗಳಲ್ಲಿ 4364 ಪ್ರಕರಣಗಳು ವರದಿಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಈ ವರ್ಷ 93012 ಡೆಂಗೆ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ

40918 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಒಟ್ಟು ಡೆಂಗೆ ಕೇಸ್ 4364ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲೇ 1530 ಮಂದಿ ಡೆಂಗೆ ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಜನವರಿಯಿಂದ ಈವರೆಗೆ 6904 ಡೆಂಗೆ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ 1530 ಮಂದಿ ಡೆಂಗೆ ಜ್ವರದಿಂದ ಬಳಲುತ್ತಿರುವುದು ದೃಢಪಟ್ಟಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ 491, ಮೈಸೂರು 431, ಹಾವೇರಿ 402, ಶಿವಮೊಗ್ಗ 249 ಡೆಂಗೆ ಜ್ವರ ಪ್ರಕರಣಗಳು ದೃಢಪಟ್ಟಿವೆ. ಶಿವಮೊಗ್ಗ, ಧಾರವಾಡ, ಹಾವೇರಿಯಲ್ಲಿ ತಲಾ ಒಬ್ಬರು, ಹಾಸನ ಮತ್ತು ಬೆಂಗಳೂರಿನಲ್ಲಿ ತಲಾ ಇಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ.

Latest Indian news

Popular Stories