5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಹೌದು, 5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.ನ್ಯಾಯಮೂರ್ತಿ ರವಿ ಹೊಸಮಂಜ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಬೋರ್ಡ್ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ

Latest Indian news

Popular Stories