ಮುಡಾ ಸೈಟು ಹಿಂಪಡೆದು 62 ಕೋಟಿ ರೂ. ನೀಡಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾದವರು ಹಂಚಿಕೆ ಮಾಡಿರುವ ನಿವೇಶನಗಳನ್ನು ಬೇಕಾದರೆ ವಾಪಸ್‌ ಪಡೆದು ತಮ್ಮ ಜಮೀನಿನ ಮೌಲ್ಯದ 62 ಕೋಟಿ ರೂ. ಗಳನ್ನು ಕಾನೂನು ರೀತ್ಯ ಮುಡಾ ತಮಗೆ ಕೊಟ್ಟುಬಿಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ.

ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ.ಗಳನ್ನು ಕೊಟ್ಟುಬಿಡಬೇಕಾ ಅವರು ಇದೇ ವೇಳೆ ತಿಳಿಸಿದರು.ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿ-ಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯತಿಳಿಸಿದರು.

Latest Indian news

Popular Stories