7ನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಸುದ್ದಿ

ಬೆಂಗಳೂರು :7 ನೇ ವೇತನ ಆಯೋಗದ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದುಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದು ವರದಿ ಶೀಘ್ರ ಬರಲಿದ್ದು,ಅದರನುಸಾರ ಕ್ರಮವಹಿಸಲಾಗುವುದು ಎಂದ ಮುಖ್ಯಮಂತ್ರಿಗಳು, 2023-24ನೇ ಸಾಲಿನಲ್ಲಿಯೇ ವೇತನ ಆಯೋಗದ ವರದಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ಆಯೋಗ ಮಧ್ಯಂತರ ವರದಿ ನೀಡುವುದೋ ಅಥವಾ ಪೂರ್ಣ ವರದಿ ಸಲ್ಲಿಸುವುದೋ ಅದರನುಸಾರ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಇದಕ್ಕಾಗಿ ಅನುದಾನ ಮೀಸಲಿಟ್ಟಿರುವುದರಿಂದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Latest Indian news

Popular Stories