ಬೆಂಗಳೂರು ಫೆಬ್ರವರಿ.12: ರಾಜ್ಯ ರಾಜಧಾನಿಯಲ್ಲಿ ಸಂಚಾರಿ ನಿಯಮ ಪಾಲಿಸಬೇಕು ಎಂದು ಪೊಲೀಸರು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆ ಕೂಡ ಹಲವು ನಿಯಮಗಳನ್ನು ಮಾಡಿದೆ. ರಸ್ತೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳು, ಎಐ ಕ್ಯಾಮೆರಾಗಳು ಕಾರ್ಯ ನಿರ್ವಹಿಸುತ್ತಿವೆ.
ಆದರೂ ಕೂಡ ಟ್ರಾಫಿಕ್ ನಿಯಮ ಉಲ್ಲಂಘನೆ ಕಡಿಮೆಯಾಗುತ್ತಿಲ್ಲ.ಹೀಗಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ತಾವೇ ರಸ್ತೆಗಿಳಿಯುತ್ತಿದ್ದಾರೆ. ಸಾವಿರಾರು ರೂಪಾಯಿ ದಮಡಕ್ಕೂ ಹೆದರದ ಜನ, ಪೊಲೀಸರಿಗೂ ಹೆದರುತ್ತಿಲ್ಲ.ಹೆಲ್ಮೆಟ್ ಇಲ್ಲದೆ ರಸ್ತೆಗಿಳಿಯುತ್ತಿದ್ದಾರೆ.
ಅವರನ್ನು ಹಿಡಿದರೇ ಪೊಲೀಸರ ಮೇಲೆಯೇ ಹಲ್ಲೆಗಳಾಗುತ್ತಿವೆ. ಇಂತಹದ್ದೆ ಘಟನೆ ಸೋಮವಾರ ವರದಿಯಾಗಿದೆ. ಪೊಲೀಸ್ ಕಾನ್‌ಸ್ಟೆಬಲ್ ಕೈ ಕಚ್ಚಿದ ವ್ಯಕ್ತಿ!ಸಾರ್ವಜನಿಕ ಸ್ಥಳದಲ್ಲಿಯೇ ವ್ಯಕ್ತಿಯೊಬ್ಬ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರ ಮೇಲೆ ಹಲ್ಲೆ ನಡೆಸಿ, ಅವರ ಕೈ ಕಚ್ಚಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ವರದಿಯಾಗಿದೆ.
ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ತಡೆ ಹಿಡಿದಿದ್ದಾರೆ. ಈ ವೇಳೆ ಹೆಲ್ಮೆಟ್ ಇಲ್ಲದ ಫೋಟೋ ಅಪ್‌ಲೋಡ್ ಮಾಡುವುದಾಗಿ ಹೇಳಿದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬರೋಬ್ಬರಿ 257 ಪ್ರದೇಶಗಳಲ್ಲಿ ನೀರಿಗೆ ಹಾಹಾಕಾರಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋಗೆ ಬೆಂಗಳೂರು ಸಂಚಾರಿ ಪೊಲೀಸರು ಕೂಡ ಅಧಿಕೃತವಾಗಿ ಸ್ಪಷ್ಟನೆ ನೀಡಿದ್ದಾರೆ.