ಬೆಂಗಳೂರು :ಕೆ.ಎಸ್.ಆರ್.ಟಿ.ಸಿ ಬಸ್ ಡಿವೈಡಗೆ ಡಿಕ್ಕಿ – ಓರ್ವ ಮಹಿಳೆಗೆ ಗಂಭೀರ ಗಾಯ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘತ ಸಂಭವಿಸಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಉತ್ತರ ತಾಲೂಕಿನ ಮಾದವಾರ ಬಳಿ ಈ ಅಪಘಾತ ಸಂಭವಿಸಿದ್ದು ಬಸ್ ನಲ್ಲಿ 20 ಪ್ರಯಾಣಿಕರಿದ್ದರು.ಅಪಘಾತದಲ್ಲಿ ಬಸ್ ನ ಮುಂಭಾಗದಲ್ಲಿ ಕುಳಿತಿದ್ದ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ.ಗಾಯಾಳು ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories