ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ವಿಧಿವಶ

ಬೆಂಗಳೂರು ಫೆಬ್ರವರಿ 29: ನಟ, ರಾಜಕಾರಣಿ, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ವಿಧಿವಶರಾಗಿದ್ದಾರೆ. ಕಾರ್ಡಿಯಕ್ ಅರೆಸ್ಟ್ ಹಾಗೂ ಇತರ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು, ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.ಕಳೆದ 20 ದಿನಗಳಿಂದ ಶಿವರಾಮ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ದಿನದಿಂದ ದಿನಕ್ಕೆ ಅವರ ಆರೋಗ್ಯದ ಸ್ಥಿತಿ ಚಿಂತಾಜನಕವಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶಿವರಾಮ್ ಅವರಿಗೆ ಡಾ.ಶೇಖರ್ ಪಾಟೀಲ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆ ಶಿವರಾಮ್ ನಟನಾಗಿ ಅಷ್ಟೇ ಅಲ್ಲದೇ ಉತ್ತಮ ರಾಜಕಾರಣಿಯಾಗಿಯೂ ಜನಪ್ರಿಯತೆ ಪಡೆದಿದ್ದರು. ನಟನೆ, ರಾಜಕೀಯ ಮಾತ್ರವಲ್ಲದೇ ಕೆ.ಶಿವರಾಮ್​ ಐಎಎಸ್​ ಅಧಿಕಾರಿಯಾಗಿದ್ದರು.

ಕನ್ನಡದಲ್ಲೇ ಐಎಎಸ್ ಪರೀಕ್ಷೆ​ ಬರೆದು ಉತ್ತೀರ್ಣರಾದ ಕೀರ್ತಿ ಇವರಿಗೆ ಸಲ್ಲಿತ್ತು. ಬಳಿಕ ಕೆ.ಶಿವರಾಮ್ ಅವರಿಗೆ ಸಿನಿಮಾ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿದ್ದು, ಬಳಿಕ ಸರ್ಕಾರಿ ಸೇವೆಗೆ ವಿದಾಯ ಹೇಳಿ ಸಿನಿಮಾದತ್ತ ಹೆಜ್ಜೆ ಇಟ್ಟರು.’ಬಾ ನಲ್ಲೆ ಮಧುಚಂದ್ರಕೆ’ ನಟ ಕೆ. ಶಿವರಾಮ್ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು ಕೆ.ಶಿವರಾಮ್​ ‘ಬಾನಲ್ಲೆ ಮಧುಚಂದ್ರಕ್ಕೆ’, ‘ವಸಂತಕಾವ್ಯ’ ಚಿತ್ರದಲ್ಲಿ ನಾಯಕನಾಗಿ ನಟನೆ ಮಾಡಿದ್ದರು. ಬಳಿಕ ರಾಜಕೀಯದತ್ತ ಹೆಜ್ಜೆಯಿಟ್ಟು ಬಿಜೆಪಿ ಪಕ್ಷ ಸೇರ್ಪಡೆಗೊಂಡಿದ್ದರು.

Latest Indian news

Popular Stories