ಬೆಂಗಳೂರು, ಫೆಬ್ರವರಿ, 16: ಸಿಎಂ ಸಿದ್ದರಾಮಯ್ಯನವರು ಇಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ವೇಳೆ 2025ರೊಳಗೆ 44 ಕಿಲೋ ಮೀಟರ್ ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುವುದು ಎಂದು ಘೋಷಣೆ ಮಾಡಿದರು.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್!ನಮ್ಮ ಮೆಟ್ರೋ ಬೆಂಗಳೂರು ಜನರ ಜೀವನಾಡಿಯಾಗಿದ್ದು, ಟ್ರಾಫಿಕ್‌ನಿಂದ ತಪ್ಪಿಸಿಕೊಂಡು ಕಡಿಮೆ ಸಮಯದಲ್ಲಿ ಕಚೇರಿ ಹಾಗೂ ತಮ್ಮ ಗಮ್ಯ ಸ್ಥಾನಗಳಿಗೆ ತಲುಪಬಹುದಾಗಿದೆ.
ಆದ್ದರಿಂದ ಇಲ್ಲಿನ ಬಹುತೇಕ ಪ್ರಯಾಣಿಕರು ಮೆಟ್ರೋವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅವರು 15ನೇ ಬಾರಿ ಬಜೆ ಮಂಡನೆ ಮಾಡಿದ್ದಾರೆ. ಈ ವೇಳೆ ಮೆಟ್ರೋಗೆ ಮತ್ತಷ್ಟು ವೇಗ ಕೊಟ್ಟಿದ್ದು, ಹೊಸದಾಗಿ 2025ರೊಳಗೆ 44 ಕಿಲೋ ಮೀಟರ್ ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.