ರಾಜ್ಯ ಸರ್ಕಾರದಿಂದ ‘ಸಮುದಾಯ ಭವನ’ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ.

ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ರಾಜ್ಯ ವಲಯ ಯೋಜನೆ ಲೆಕ್ಕಶೀರ್ಷಿಕೆ 2225-03-001-0-05ರಡಿ ಸಮುದಾಯ ಭವನ/ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕಾಗಿ ಪಟ್ಟಣ ಪಂಚಾಯಿತಿ/ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ.10.00 ಲಕ್ಷಗಳು, ತಾಲ್ಲೂಕು ಕೇಂದ್ರಸ್ಥಾನಗಳಿಗೆ ರೂ.25.00 ಲಕ್ಷಗಳು ಹಾಗೂ ಜಿಲ್ಲಾ ಕೇಂದ್ರಸ್ಥಾನಕ್ಕೆ ರೂ.50.00 ಲಕ್ಷಗಳಂತೆ ಗರಿಷ್ಠ ಮಿತಿಗೊಳಪಟ್ಟು ಪ್ರವರ್ಗ-1, 2ಎ, 3ಎ ಮತ್ತು ಪ್ರವರ್ಗ-3ಬಿಗೆ ಸೇರಿದ ಜಾತಿಗಳ ನೋಂದಾಯಿತ ಸಂಘ/ಸ್ವಯಂ ಸೇವಾ ಸಂಸ್ಥೆ/ಟ್ರಸ್ಟ್‌ಗಳಿಗೆ ಸಹಾಯಧನವನ್ನು ಮಂಜೂರು ಮಾಡಲು ಆದೇಶಿಸಲಾಗಿರುತ್ತದೆ ಎಂದಿದ್ದಾರೆ.

ದಿನಾಂಕ:05.11.2014ರ ಸರ್ಕಾರದ ಆದೇಶದಲ್ಲಿ ತಿಳಿಸಿರುವ ಅನುದಾನದ ಮಿತಿಯನ್ನು ಅಗತ್ಯ ಸಂದರ್ಭಗಳಲ್ಲಿ ಸಡಿಲಗೊಳಿಸಿ ವಿಶೇಷ ಪಕರಣವೆಂದು ಪರಿಗಣಿಸಿ ಹೆಚ್ಚುವರಿಯಾಗಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

Latest Indian news

Popular Stories