ಮಳೆಗಾಲ ಆರಂಭಕ್ಕೂ ಮುನ್ನವೇ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಬೇಕು; ಬಿಬಿಎಂಪಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಆಗಾಗ ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವೆಡೆ ರಸ್ತೆಗುಂಡಿಗಳಿಂದ ಅವಾಂತರಗಳು ಸೃಷ್ಟಿಯಾಗಿವೆ. ಮಳೆಗಾಲ ಆರಂಭಕ್ಕೂ ಮುನ್ನವೇ ಎಚ್ಚೆತ್ತಿರುವ ರಾಜ್ಯ ಸರ್ಕಾರ ರಸ್ತೆ ಗುಂಡಿ ಮುಚ್ಚುವಂತೆ ಬಿಬಿಎಂಪಿಗೆ ಸೂಚನೆ ನೀಡಿದೆ.

ಈ ಬಗ್ಗೆ ರಾಜ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ಬಿಜೆಪಿ ಆಡಳಿತದಲ್ಲಿ ಬೆಂಗಳೂರು ರಸ್ತೆ ಗುಂಡಿಗಳಿಗೆ ಹೆಸರಾಗಿತ್ತು, ರಸ್ತೆಗುಂಡಿಗಳ ಬಗ್ಗೆ ಸಾರ್ವಜನಿಕರು ವರ್ಷಗಳ ಕಾಲ ಹಿಡಿ ಶಾಪ ಹಾಕಿದ್ದರೂ ಗುಂಡಿ ಮುಚ್ಚುವ ಕೆಲಸಕ್ಕೆ ಹಿಂದಿನ ಬಿಜೆಪಿ ಸರ್ಕಾರ ಮುಂದಾಗಿರಲಿಲ್ಲ. ಪ್ರಧಾನಿಯ ರೋಡ್ ಶೋಗಾಗಿ ಹಾಕಿದ್ದ ರಸ್ತೆ ಡಾಂಬರು ಎರಡೇ ದಿನಕ್ಕೆ ಕಿತ್ತು ಬರುವ ಮೂಲಕ ಇಡೀ ದೇಶದಲ್ಲಿ ಸುದ್ದಿಯಾಗಿತ್ತು.

ನಮ್ಮ ಸರ್ಕಾರ ಬಿಜೆಪಿ ಅವಧಿಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಂಡಿದೆ, ಮಳೆಗಾಲ ಆರಂಭವಾಗುವ ಮುನ್ನವೇ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಗುಂಡಿಮುಕ್ತ ರಸ್ತೆ ಮಾಡುವುದನ್ನು ಗಂಭೀರವಾಗಿ ತೆಗೆದುಕೊಂಡು ಸಮರೋಪಾಧಿಯಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದೆ.

Latest Indian news

Popular Stories