ಪ್ರಜ್ವಲ್ ರಾಸಲೀಲೆ ಪೆನ್ ಡ್ರೈವ್ ಹಂಚಿದ ಆರೋಪ: ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧನ ಸಾಧ್ಯತೆ

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.

ಪೆನ್ ಡ್ರೈವ್ ಹಗರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಗೆ ಹಾಸನ ಜಿಲ್ಲೆಯ ಮಹಿಳೆಯೊಬ್ಬರು ದೂರು ನೀಡಿದ್ದು, ಪ್ರಜ್ವಲ್ ರೇವಣ್ಣ ಮತ್ತು ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿದ್ದ ಪ್ರಜ್ವಲ್ ಅವರನ್ನು ಬಾಡಿ ವಾರೆಂಟ್ ಮೇಲೆ ಎಸ್‌ಐಟಿ ನಾಲ್ಕು ದಿನ ವಶಕ್ಕೆ ಪಡೆದುಕೊಂಡಿದೆ. ಪ್ರೀತಮ್ ಗೌಡ ಮತ್ತು ಸಹಚರರಿಗೆ ಬಂಧನ ಭೀತಿ ಎದುರಾಗಿದ್ದು, ಎಸ್‌ಐಟಿ ಮೂವರ ಪತ್ತೆಗೆ ಶೋಧ ಕಾರ್ಯಾಚರಣೆ ಕೈಗೊಂಡಿದೆ ಎಂದು ಹೇಳಲಾಗಿದೆ.

ಹಾಸನದ ಬಿಜೆಪಿ ಮುಖಂಡ ಶರತ್ ಮತ್ತು ಕಿರಣ್ ವಿರುದ್ಧ ಸಿಐಡಿ ಠಾಣೆಯಲ್ಲಿ ಹೊಸ ಎಫ್‌ಐಆರ್ ದಾಖಲಾಗಿದೆ. ದೂರುದಾರ ಮಹಿಳೆಯ ಅಶ್ಲೀಲ ವಿಡಿಯೋವನ್ನು ಪ್ರಜ್ವಲ್ ಚಿತ್ರಕರಿಸಿದ ಆರೋಪವಿದೆ. ಆ ವಿಡಿಯೋ ಒಳಗೊಂಡ ಪೆನ್ ಡ್ರೈವ್ ಅನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಿದ್ದಾಗಿ ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಇತರರ ವಿರುದ್ಧ ಆರೋಪ ಕೇಳಿ ಬಂದಿದ್ದು ದೂರು ದಾಖಲಾಗಿದೆ.

Latest Indian news

Popular Stories