ಅಮರಾವತಿ : ಬಸ್‌ಗೆ ಬೆಂಕಿ ತಗುಲಿ ಆರು ಮಂದಿ ಸಾವು

ಅಮರಾವತಿ (ಆಂಧ್ರ), ಮೇ 15 -ಮಧ್ಯರಾತ್ರಿ ಪಲ್ನಾ ಅಡು ಜಿಲ್ಲೆಯ ಚಿಲಕಲೂರಿಪೇಟೆ ಬಳಿ ಟಿಪ್ಪರ್‌ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಸಜೀವ ದಹನಗೊಂಡಿದ್ದಾರೆ.

ಮಧ್ಯರಾತ್ರಿಯಲ್ಲಿ ಸುಮಾರು 1 ಗಂಟೆ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಾವು ಸ್ಥಳಕ್ಕೆ ತಲುಪಿದಾಗ ಬಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು ಆರು ಜನರು ಸಾವನ್ನಪ್ಪಿದ್ದಾರೆ ಎಂದು ಖಚಿತಗೊಂಡಿದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದಾರೆ.

ಎರಡೂ ವಾಹನದ ಚಾಲಕರು ಮೃತಪಟ್ಟಿದ್ದರೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಹೊರಗೆ ಬರಲಾರದೆ ಕೊನೆಯುಸಿರೆಳೆದಿದ್ದಾರೆ. ಸುಮಾರು 19 ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು.

ಇವರು ಸೋಮವಾರ ಬಾಪಟ್ಲಾ ಜಿಲ್ಲೆಯಲ್ಲಿ ನಡೆದ ಮತದಾನದಲ್ಲಿ ಪಾಲ್ಗೊಂಡು ನಂತರ ನಿನ್ನೆ ರಾತ್ರಿ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ. ಮೃತರ ಮಾಹಿತಿ ಕಲೆ ಹಾಕಲಾಗುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

Latest Indian news

Popular Stories